ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ಕಾನೂನು ಸಲಹೆ ಪಡೆಯುವ ನಿಟ್ಟಿನಲ್ಲಿ ಹಿರಿಯ ನ್ಯಾ.ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಇನ್ನು ದೆಹಲಿ ಪ್ರವಾಸದ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ. ಇದೇ ವೇಳೆ ಕೇಂದ್ರ ಜಲಸಂಪನ್ಮೂಲ ಸಚಿವರನ್ನೂ ಭೇಟಿಯಾಗುವ ಸಾಧ್ಯತೆ ಇದೆ.