ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಸಿಂ ಪಠಾಣ್, ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಗಲಭೆ ಮಾಡಿಸಿದ್ದು ನಾನೇ ಎಂದು ಹೇಳಿದ್ದಾನೆಂದು ತಿಳಿದುಬಂದಿದೆ.
ನನಗೆ ಗೊತ್ತಿಲ್ಲ, ಯಾರವರು….? ಜಿಗ್ನೇಶ್ ಮೇವಾನಿ ಕುರಿತು ಕೇಳಿದ ಪ್ರಶ್ನೆಗೆ ಅಸ್ಸಾಂ ಸಿಎಂ ಪ್ರತಿಕ್ರಿಯೆ
ನಿನ್ನೆ ವಸಿಂ ಪಠಾಣ್ ನನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ಖಾಕಿ ಡ್ರಿಲ್ ಗೆ ಸತ್ಯ ಬಾಯ್ಬಿಟ್ಟ ವಸಿಂ ಪಠಾಣ್, ತಾನೇ ವಾಟ್ಸಪ್ ಗ್ರೂಪ್ ರಚಿಸಿದ್ದಾಗಿ ಹಾಗೂ ಪೊಲೀಸರು ಬಗ್ಗದೇ ಹೋದರೆ ಪ್ರತಿಭಟನೆ ಮಾಡೋಣ ಎಂದು ಹೇಳಿದ್ದಾಗಿ ತಿಳಿಸಿದ್ದಾನೆ.
ವಾಸಿಂ ಬೇಪಾರಿ, ತುಫೆಲ್ ಮುಲ್ಲಾ ಜತೆ ಸೇರಿ ಗಲಭೆಗೆ ಪ್ರಚೋದನೆ ನೀಡಿದ್ದಾಗಿ ಹೇಳಿದ್ದಾನೆ. ಆದರೆ ಗಲಭೆ ಜಾಗದಲ್ಲಿ ಸಂಗ್ರಹವಾಗಿದ್ದ ಕಲ್ಲುಗಳ ಬಗ್ಗೆ ತನಗೆ ಗೊತ್ತಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.