BIG NEWS: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ; ಮೇಯರ್ ಆಗಿ ವೀಣಾ ಬರದ್ವಾಡ್ ಆಯ್ಕೆ

ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ-ಧಾರವಾಡ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅವಳಿ ನಗರ ಮಹಾನಗರ ಪಾಲಿಕೆ ಗದ್ದುಗೆ ಬಿಜೆಪಿ ಪಾಲಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ವೀಣಾ ಬರದ್ವಾಡ್ ಆಯ್ಕೆಯಾಗಿದ್ದಾರೆ. ವೀಣಾ ಬರದ್ವಾಡ್ ಪರ 46 ಮತಗಳು ಚಲಾವಣೆಗೊಂಡಿವೆ.

ಕಾಂಗ್ರೆಸ್ ಅಭ್ಯರ್ಥಿ ಸುವರ್ಣ ಅವರ ಪರ 37 ಮತಗಳು ಬಂದಿವೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾಗಿದೆ.

ಉಪ ಮೇಯರ್ ಆಗಿ ಬಿಜೆಪಿಯ ಸತೀಶ್ ಹಾನಗಲ್ ಆಯ್ಕೆಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read