alex Certify BIG NEWS: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ; ಮೇಯರ್ ಆಗಿ ವೀಣಾ ಬರದ್ವಾಡ್ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ; ಮೇಯರ್ ಆಗಿ ವೀಣಾ ಬರದ್ವಾಡ್ ಆಯ್ಕೆ

ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ-ಧಾರವಾಡ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅವಳಿ ನಗರ ಮಹಾನಗರ ಪಾಲಿಕೆ ಗದ್ದುಗೆ ಬಿಜೆಪಿ ಪಾಲಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ವೀಣಾ ಬರದ್ವಾಡ್ ಆಯ್ಕೆಯಾಗಿದ್ದಾರೆ. ವೀಣಾ ಬರದ್ವಾಡ್ ಪರ 46 ಮತಗಳು ಚಲಾವಣೆಗೊಂಡಿವೆ.

ಕಾಂಗ್ರೆಸ್ ಅಭ್ಯರ್ಥಿ ಸುವರ್ಣ ಅವರ ಪರ 37 ಮತಗಳು ಬಂದಿವೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾಗಿದೆ.

ಉಪ ಮೇಯರ್ ಆಗಿ ಬಿಜೆಪಿಯ ಸತೀಶ್ ಹಾನಗಲ್ ಆಯ್ಕೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...