alex Certify BIG NEWS: ಹೃದಯಾಘಾತ; ಜೈಲಿನಲ್ಲಿಯೇ ಮೃತಪಟ್ಟ ಕೈದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೃದಯಾಘಾತ; ಜೈಲಿನಲ್ಲಿಯೇ ಮೃತಪಟ್ಟ ಕೈದಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಸೋಮಶೇಖರ್ ಮೃತ ಕೈದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನೇಕಲ್ ತಾಲೂಕಿನ ನಿವಾಸಿಯಾಗಿರುವ ಸೋಮಶೇಖರ್, 6 ವರ್ಷಗಳ ಹಿಂದೆ ಪ್ರಕರಣವೊಂದರಲ್ಲಿ ಜೈಲುಶಿಕ್ಷೆಗೆ ಒಳಗಾಗಿದ್ದ.

ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದ ಕೈದಿ ಸೋಮಶೇಖರ್ ಗೆ ಏಕಾಏಕಿ ಹೃದಯಾಘಾತವಾಗಿದೆ. ತಕ್ಷಣ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...