ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಹೃದಯಬಡಿತ ಏಕಾಏಕಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ನಾಗ್ ಅಶ್ವಿನ್ ನಿರ್ದೇಶನದ ‘ಪ್ರಾಜೆಕ್ಟ್ ಕೆ’ ಸಿನಿಮಾ ಚಿತ್ರೀಕರಣಕ್ಕಾಗಿ ದೀಪಿಕಾ ಪಡುಕೋಣೆ ಹೈದರಾಬಾದಿಗೆ ಬಂದಿದ್ದು, ಆದರೆ ಅವರ ಹೃದಯ ಬಡಿತದಲ್ಲಿ ಏಕಾಏಕಿ ಹೆಚ್ಚಳವಾದ ಕಾರಣ ಆತಂಕಕ್ಕೆ ಕಾರಣವಾಗಿತ್ತು.
ಚಿಕಿತ್ಸೆ ಬಳಿಕ ಅವರ ಆರೋಗ್ಯ ಪರಿಸ್ಥಿತಿಯಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲವೆಂದು ತಿಳಿದು ಬಂದಿದ್ದು, ಈಗ ಆಸ್ಪತ್ರೆಯಿಂದ ಬಿಡುಗಡೆಗೊಂಡು ಚಿತ್ರೀಕರಣಕ್ಕೆ ಮತ್ತೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.