alex Certify BIG NEWS: ಹೆಚ್ಚುತ್ತಿರುವ ವಾಯು ಮಾಲಿನ್ಯ: ಕಡ್ಡಾಯ ವರ್ಕ್ ಫ್ರಂ ಹೋಂಗೆ ಸೂಚಿಸಿದ ಸುಪ್ರೀಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್ಚುತ್ತಿರುವ ವಾಯು ಮಾಲಿನ್ಯ: ಕಡ್ಡಾಯ ವರ್ಕ್ ಫ್ರಂ ಹೋಂಗೆ ಸೂಚಿಸಿದ ಸುಪ್ರೀಂ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕಡ್ಡಾಯವಾಗಿ ವರ್ಕ್ ಫ್ರಂ ಹೋಂಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ದೆಹಲಿಯಲ್ಲಿ ಮಾಲಿನ್ಯದಿಂದಾಗಿ ಉಸಿರಾಟಕ್ಕೂ ತೊಂದರೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ವರ್ಕ್ ಫ್ರಂ ಹೋಂಗೆ ಸೂಚನೆ ನೀಡಿದೆ. ಅಲ್ಲದೇ ಮಾಲಿನ್ಯ ನಿಯಂತ್ರಣಕ್ಕೆ ಹಾಗೂ ಗಾಳಿ ಗುಣಮಟ್ಟ ಸುಧಾರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ತುರ್ತು ಸಭೆಯನ್ನು ಕರೆಯುವಂತೆ ತಾಕೀತು ಮಾಡಿದೆ.

ಹಸುವಿನ ಸಗಣಿ, ಗೋಮೂತ್ರದ ನೆರವಿನಿಂದ ದೇಶದ ಆರ್ಥಿಕತೆ ಸದೃಢ: ಮಧ್ಯಪ್ರದೇಶ ಮುಖ್ಯಮಂತ್ರಿ ಹೇಳಿಕೆ

ಸುಪ್ರೀಂ ಆದೇಶದಂತೆ ಈಗಾಗಲೇ ದೆಹಲಿಯಲ್ಲಿ ಎರಡು ದಿನಗಳ ಕಾಲ ಲಾಕ್ ಡೌನ್ ಜಾರಿಯಾಗಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಲಾಕ್ ಡೌನ್ ಹಾಗೂ ಅದರ ವಿಧಿವಿಧಾನಗಳ ಬಗ್ಗೆ ಸುಪ್ರೀಂ ಕೋರ್ಟ್ ಗೆ ಪ್ರಸ್ತಾವನೆ ಸಲ್ಲಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...