ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಶಾಸಕ ಎ.ಟಿ.ರಾಮಸ್ವಾಮಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರನ್ನು ರಾವಣನಿಗೆ ಹೋಲಿಸಿದ್ದಾರೆ.
ರಾವಣನಿಗೆ ಸಕಲ ಐಶ್ವರ್ಯ ಇತ್ತು, ಈಶ್ವರನಿಂದ ಪಡೆದ ಶಕ್ತಿಶಾಲಿ ಅಸ್ತ್ರಗಳಿದ್ದರೂ ಅವನು ನಾಶವಾದ , ಲಂಕೆ ಕೂಡ ಬೂದಿಯಾಯ್ತು, ಯಾರೂ ಶಾಶ್ವತ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವೇಗೌಡರನ್ನು ಇವರೆಲ್ಲ ಉತ್ಸವ ಮೂರ್ತಿ ಮಾಡಿಕೊಂಡಿದ್ದಾರೆ. ಅಂತಹ ಮುತ್ಸುದ್ದಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿದ್ದಾರೆ. ಅವರ ಮಾತಿಗೆ ಕಿಮ್ಮತ್ತು ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.