ಹಾಸನ: ರಾಜ್ಯದಲ್ಲಿ ಹೆಚ್ 3 ಎನ್ 2 ಎಂಬ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ.
ಬಿರು ಬೇಸಿಗೆ ನಡುವೆಯೇ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ನೆಗಡಿ, ಕೆಮ್ಮು, ಜ್ವರದಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇದು H3N2 ಸೋಂಕಿನ ಲಕ್ಷಣಗಳಾಗಿದ್ದು, ಈ ವೈರಸ್ ಗೆ ಹಿರಿಯ ನಾಗರಿಕರೊಬ್ಬರು ಬಲಿಯಾಗಿದ್ದಾರೆ.
H3N2 ವೈರಸ್ ನಿಂದ ಬಳಲುತ್ತಿದ್ದ ಹಾಸನ ಮೂಲದ 82 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಚಳಿ, ಜ್ವರ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಹಾಸನ ಜಿಲ್ಲೆಯಲ್ಲಿಯೇ 6 ಜನರಲ್ಲಿ H3N2 ವೈರಸ್ ಪತ್ತೆಯಾಗಿದೆ.