ಮಂಡ್ಯ: ಹೆಡ್ ಕಾನ್ಸ್ ಟೇಬಲ್ ಮನೆ ಬಾಗಿಲು ಒಡೆದು ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಬಳಿಯ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ರವಿ ಎಂಬುವವರ ಮನೆಗೆ ನುಗ್ಗಿ ಕಳ್ಳರು ಕೈಚಳಕ ತೋರಿದ್ದಾರೆ. ರವಿ ಶ್ರೀರಂಗಪಟ್ಟಣದ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರವಿ ಅವರು ಪತ್ನಿ ಜೊತೆ ಮೈಸೂರಿನ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಹುಲಿಕೆರೆಯಲ್ಲಿನ ಅವರ ಮನೆಗೆ ನುಗ್ಗಿ ಮನೆ ಬಾಗಿಲು ಒಡೆದು 95 ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಮನೆಗೆ ವಾಪಸ್ ಆದಾಗ ಕೃತ್ಯ ಬಯಲಿಗೆ ಬಂದಿದೆ.