ಉಡುಪಿ: ಕಾರ್ಕಳದ ಹೇಬ್ರಿಯಲ್ಲಿ ಭೂ ಅವ್ಯವಹಾರ ನಡೆದಿದ್ದು, ಇದರ ಹಿಂದೆ ಸ್ಥಳೀಯ ಶಾಸಕ, ಪ್ರಭಾವಿ ಸಚಿವರ ಕೈವಾಡವಿದೆ ಎಂದು ಹೇಳುವ ಮೂಲಕ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಚಿವ ಸುನೀಲ್ ಕುಮಾರ್ ವಿರುದ್ಧ ಪರೋಕ್ಷ ಆರೋಪ ಮಾಡಿದ್ದಾರೆ.
ಹೇಬ್ರಿಯಲ್ಲಿನ ಭೂ ಅವವಹಾರದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುತಾಲಿಕ್, ಉಡುಪಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅಕ್ರಮದಲ್ಲಿ ಸ್ಥಳೀಯ ಶಾಸಕ, ಸಚಿವರ ಕೈವಾಡವಿದೆ ಎಂದು ಸಚಿವ ಸುನೀಲ್ ಕುಮಾರ್ ಅವರ ಹೆಸರು ಉಲ್ಲೇಖಿಸದೇ ದೂರು ನೀಡಿದ್ದಾರೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮುತಾಲಿಕ್ ಸಚಿವರ ವಿರುದ್ಧ ಆರೋಪ ಮಾಡಿದ್ದು, ವಿಪಕ್ಷಗಳು ಇದನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸುವ ಸಾಧ್ಯತೆ ದಟ್ಟವಾಗಿದೆ.