ನವದೆಹಲಿ: MI-17V5 ಹೆಲಿಕಾಪ್ಟರ್ ದುರಂತ ಪ್ರಕರಣದ ತನಿಖೆಗೆ ಏರ್ ಮಾರ್ಷಲ್ ಮನ್ವೆಂದ್ರ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಲೊಕಸಭೆಯಲ್ಲಿ ಮಾಹಿತಿ ನೀಡಿದ ಸಚಿವ ರಾಜನಾಥ್ ಸಿಂಗ್, ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಗೆ ಗಂಭೀರ ಗಾಯಗಳಾಗಿದ್ದು, ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀವರಕ್ಷಕಗಳ ಮೂಲಕ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದರು.
ಬಿಡುಗಡೆಯಾಯ್ತು ಬಹು ನಿರೀಕ್ಷಿತ ‘RRR’ ಟ್ರೈಲರ್
ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲ ಸಮಯದಲ್ಲೇ ನಿಯಂತ್ರಣ ಕಳೆದುಕೊಂಡಿದೆ. ಬುಧವಾರ ಬೆಳಿಗ್ಗೆ 11.48ಕ್ಕೆ ಹೆಲಿಕಾಪ್ಟರ್ ಟೇಕ್ ಆಫ್ ಆಗಿದ್ದು, ಮಧ್ಯಾಹ್ನ 12.8ಕ್ಕೆ ಏರ್ ಟ್ರಾಫಿಕ್ ಕಂಟ್ರೋಲರ್ ನಿಯಂತ್ರಣ ಕಳೆದುಕೊಂಡಿದೆ. ಸ್ಥಳೀಯರು ಹೆಲಿಕಾಪ್ಟರ್ ಹೊತ್ತಿ ಉರಿಯುತ್ತಿರುವುದನ್ನು ನೋಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿತ್ತು. ದುರಂತದಲ್ಲಿ ಗಾಯಗೊಂಡವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾವಿಸಲಾಗಿತ್ತು. ಹೆಲಿಕಾಪ್ಟರ್ ದುರಂತ ಪ್ರಕರಣವನ್ನು ಐಎಎಫ್ ಟ್ರೇನಿಂಗ್ ಕಮಾಂಡರ್ ಮನ್ವೆಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.