ಚೆನ್ನೈ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮದುಲಿಕಾ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಹೆಲಿಕಾಪ್ಟರ್ ದುರಂತಕ್ಕೀಡಾದ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ.
ಇನ್ನು Mi-17V5 ಹೆಲಿಕಾಪ್ಟರ್ ದುರಂತ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಪ್ರಧಾನಿ ಮೋದಿ ನೇತೃತ್ವದಲ್ಲಿ ತುರ್ತು ಸಭೆ ನಡೆದಿದೆ. ಈ ನಡುವೆ ವಾಯುಸೇನಾ ಮುಖ್ಯಸ್ಥ ವಿವೇಕ್ ರಾಮ್ ಚೌದರಿ ಘಟನಾ ಸ್ಥಳಕ್ಕೆ ಧಾವಿಸಿದ್ದು ಪರಿಸ್ಥಿತಿ ಅವಲೋಕಿಸಲಿದ್ದಾರೆ.