alex Certify BIG NEWS: ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರ

ಚೆನ್ನೈ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 9 ಜನರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ದುರ್ಘಟನೆಯಲ್ಲಿ 7 ಜನರು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಸೇನಾ ಹೆಲಿಕಾಪ್ಟರ್ ನಲ್ಲಿ ಬಿಪಿನ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡುಯರ್ ಎಲ್.ಎಸ್.ಲಿಡ್ಡೆರ್, ಲೆ.ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್ ಸೇರಿದಂತೆ 9 ಜನರು ಪ್ರಯಾಣಿಸುತ್ತಿದ್ದರು.

ಕೋಯಮತ್ತೂರ್ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಉಪನ್ಯಾಸ ನೀಡಲೆಂದು ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಿಪಿನ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಹೆಲಿಕಾಪ್ಟರ್ ದುರಂತದಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ಅಧಿಕೃತ ಮಾಹಿತಿ ಲಭ್ಯವಾಗಿದೆ. ಆದರೆ 7 ಜನರು ಮೃತಪಟ್ಟಿರುವ ಶಂಕೆ ಇದೆ ಎಂದು ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...