ಬೆಂಗಳೂರು: ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸೂಚಿಸಿರುವ ಬೆನ್ನಲ್ಲೇ ಮತ್ತೆ ಸ್ಪರ್ಧೆ ಕ್ಷೇತ್ರದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನಗೆ ಯಾವುದೇ ಟೆನ್ಶನ್ನೂ ಇಲ್ಲ. ಹೈಕಮಾಂಡ್ ಎಲ್ಲಿ ಹೇಳುತ್ತೆ ಅಲ್ಲಿ ಸ್ಪರ್ಧೆ ಮಾಡ್ತೀನಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೋಲಾರದಲ್ಲಿ ಹೇಳಿದ್ರೇ ಕೋಲಾರ, ವರುಣಾದಲ್ಲಿ ಹೇಳಿದ್ರೆ ವರುಣಾ, ಇಲ್ಲ ಬಾದಿಮಿಯಿಂದಲೇ ಸ್ಪರ್ಧೆ ಮಾಡಿ ಎಂದು ಹೇಳಿದ್ರೆ ಬಾದಾಮಿಯಿಂದಲೇ ಸ್ಪರ್ಧೆ ಮಾಡ್ತೀನಿ. ಹೈಕಮಾಂಡ್ ನವರು ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂದು ಹೇಳುತ್ತಾರೋ ಅಲ್ಲಿಂದ ನಿಲ್ಲುತ್ತೇನೆ. ಯುಗಾದಿ ದಿನ ಟಿಕೆಟ್ ಘೋಷಣೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.
ನನಗೆ ಯಾವ ಟೆನ್ಶನ್ನೂ ಇಲ್ಲ. ಹೈಕಮಾಂಡ್ ನಿರ್ಧಾರವೇ ಅಂತಿಮ. ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಸೂಚಿಸ್ತಾರೋ ಅಲ್ಲಿಂದ ಸ್ಪರ್ಧೆ ಮಾಡಲು ಸಿದ್ಧ ಎಂದು ಹೇಳಿದರು.