ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ 3 ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ಸಲ್ಲಿಸಿದ್ದು, ಸಿಎಂ ಬಿ.ಎಸ್.ವೈ. ಪರ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ʼಯೋಗʼ ಮಾಡುವ ಮೊದಲು ಇದನ್ನು ತಿಳಿದುಕೊಳ್ಳಿ
ಸಿಎಂ ಬಿ.ಎಸ್. ಯಡಿಯೂರಪ್ಪ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅರುಣ್ ಸಿಂಗ್, ಓರ್ವ ಸಚಿವ, ಇಬ್ಬರು ಶಾಸಕರಿಂದ ಮಾತ್ರ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಸಿ.ಪಿ. ಯೋಗೇಶ್ವರ್, ಶಾಸಕ ಅರವಿಂದ್ ಬೆಲ್ಲದ್, ಹೆಚ್. ವಿಶ್ವನಾಥ್ ಸಿಎಂ ಬದಲಾವಣೆಗೆ ಮನವಿ ಮಾಡಿದ್ದಾರೆ. ಉಳಿದಂತೆ ಎಲ್ಲರೂ ಯಡಿಯೂರಪ್ಪ ನಾಯಕತ್ವದ ಪರವಾಗಿ ಮಾತನಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಕೇವಲ 25 ಸಾವಿರಕ್ಕೆ ಈ ಬ್ಯುಸಿನೆಸ್ ಶುರು ಮಾಡಿ ತಿಂಗಳಿಗೆ ಗಳಿಸಿ 50 ಸಾವಿರ
ಒಟ್ಟು 80 ಪುಟಗಳ ವರದಿ ಸಲ್ಲಿಸಿರುವ ಅರುಣ್ ಸಿಂಗ್, ಬಿ.ಎಸ್.ವೈ. ಪುತ್ರ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಹಲವರಿಂದ ಆಕ್ಷೇಪಗಳು ಕೇಳಿಬಂದಿದೆ. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮೊದಲಾದವರು ಗೂಢಾರ್ಥದ ಅಭಿಪ್ರಾಯ ವ್ಯಕ್ತಪಡಿಸಿ ಗೊಂದಲಗಳನ್ನುಂಟು ಮಾಡುತ್ತಿದ್ದಾರೆ. ಕೆಲ ಮುಖಂಡರಿಂದ ಪಕ್ಷ ವಿರೋಧಿ ಚಟುವಟಿಕೆಗಳು ನಡೆದಿವೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದಿಂದ ಪಕ್ಷಕ್ಕೆ ಮುಜುಗರವಾಗುವುದನ್ನು ತಡೆಯಬೇಕಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.