ನವದೆಹಲಿ: ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಟ್ಟು ಸಡಿಲಿಸಿ, ಹೈಕಮಾಂಡ್ ಹೆಣೆದ ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಹೈಕಮಾಂಡ್ ಫಾರ್ಮುಲಾಗೆ ನನ್ನ ಸಹಮತವಿದೆ. 30-30 ತಿಂಗಳ ಅಧಿಕಾರ ಹಂಚಿಕೆ ಸೂತ್ರಕ್ಕೆ ನಾನು ಒಪ್ಪಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಅಧಿಕಾರ ಹಂಚಿಕೆ ಸೂತ್ರ ಪಾಲನೆ ಮಾಡಲಾಗುತ್ತಿದೆ. ಕರ್ನಾಟಕ ಜನರ ಸೇವೆ ಮಾಡಲು ಕಟಿಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.
ತಡರಾತ್ರಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯನವರಿಗೆ ಮೊದಲ ಎರಡುವರೆ ವರ್ಷ ಮುಖ್ಯಮಂತ್ರಿಯಾಗಲು ಅವಕಾಶ ನಂತರದ ಎರಡುವರೆ ವರ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆಗೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ. ಮೇ 20ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.