ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಸಮಾಧಾನಕರವಾಗಿಲ್ಲ. ಸಂವಿಧಾನಿಕ ದೃಷ್ಟಿಯಿಂದ ತೀರ್ಪು ಬಂದಿಲ್ಲ ಎಂದು ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಹೈಕೋರ್ಟ್ ತೀರ್ಪು ಅಸಮಾಧಾನ ತಂದಿದೆ. ಕೋರ್ಟ್ ತೀರ್ಪನ್ನು ಧರ್ಮದ ದೃಷ್ಟಿಯಿಂದ ನೋಡಬಾರದು. ಸಂವಿಧಾನದ ದೃಷ್ಟಿಯಿಂದ ನೋಡಬೇಕು. ಮೂಲಭೂತವಾಗಿ ಧರ್ಮಕ್ಕೆ ಅಡಚಣೆಯಿಲ್ಲ ಎಂದು ಹೇಳಲಾಗಿದೆ. ಸರ್ಕಾರ ಮಾತುಕತೆಯ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದರು.
ತಿಲಕ, ವಿಭೂತಿ ಅಲಂಕಾರಿಕ ವಸ್ತುವಲ್ಲ, ಭಕ್ತಿಯ ಸಂಕೇತ. ನಾಳೆ ಜೀನ್ಸ್, ಬೇರೆ ಉಡುಪಿನ ಬಗ್ಗೆಯೂ ಚರ್ಚೆಯಾಗಬಹುದು. ನೋಡೋಣ ಈ ವಿಚಾರವನ್ನು ನಮ್ಮ ಸಮಾಜದ ಮುಖಂಡರು ತೀರ್ಮಾನಿಸುತ್ತಾರೆ ಎಂದು ಹೇಳಿದರು.