ಬೆಂಗಳೂರು: ಹಿಜಾಬ್ ಕುರಿತ ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಅನಗತ್ಯ ವಿಚಾರಗಳ ಬಗ್ಗೆ ಗಮನ ನೀಡಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು ಪ್ರಕಟವಾಗಿದೆ. ನ್ಯಾಯಾಲಯ ನೀಡಿರುವ ತೀರ್ಪನ್ನು ಎಲ್ಲರೂ ಪಾಲಿಸಬೇಕು. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
ಕೇವಲ 9 ಸೆಕೆಂಡ್ಗಳಲ್ಲಿ ನೆಲಸಮಗೊಳ್ಳಲಿದೆ ನೋಯ್ಡಾದ ಅತಿ ಎತ್ತರದ ಅವಳಿ ಕಟ್ಟಡ
ಎಲ್ಲಾ ಸಮುದಾಯದ ನಾಯಕರು, ಪೋಷಕರು, ಶಿಕ್ಷಕರು, ವಿಶೇಷವಾಗಿ ವಿದ್ಯಾರ್ಥಿಗಳು ಶಾಂತಿ-ಸುವ್ಯವಸ್ಥೆ ಕಾಪಾಡಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ. ವಿದ್ಯೆಗಿಂತ ಹೆಚ್ಚಿನದ್ದು ಯಾವುದೂ ಇಲ್ಲ. ಅನಗತ್ಯ ವಿಚಾರಗಳಿಗೆ ಗಮನ ಕೊಡದೇ ಭವಿಷ್ಯ, ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ ಎಂದು ಸಲಹೆ ನೀಡಿದರು.