ಬೆಂಗಳೂರು: ಬಿಜೆಪಿಯಲ್ಲಿ ವಿಧಾನಸಭಾ ಚುನಾವಣೆಯ ಸೋಲಿನ ಅವಲೋಕನ ಚೆನ್ನಾಗಿ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ನೀಡಿದೆ.
ಬಸವರಾಜ್ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಬಿಜೆಪಿಯಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ. ಹೊಂದಾಣಿಕೆ ರಾಜಕಾರಣದ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಹಾಗೂ ಸಿ.ಟಿ.ರವಿ ಹೇಳಿಕೆಗೂ ಬೇರೆಯದ್ದೇ ಕಾರಣಗಳಿವೆ. ಅವರ ಹೇಳಿಕೆಗಳ ಹಿಮ್ದಿರುವುದು ಕೂಡ ಮತ್ತದೇ ಜೋಶಿ, ಸಂತೋಷ್ ಜೋಡಿ ಎಂದು ಹೇಳಿದೆ.
ವಿಧಾನಸಭಾ ಚುನಾವಣೆ ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ, ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದೆ.