ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಮುಂಜಾಗೃತಾ ಕ್ರಮವಾಗಿ ಕೆಲ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೋವಿಡ್ ಬಗ್ಗೆ ಜನರು ಮುನ್ನೆಚ್ಚರಿಕೆ ವಹಿಸಬೇಕು. ಆತಂಕ ಪಡುವ ಅಗತ್ಯವಿಲ್ಲ. ಮುಂಜಾಗೃತಾ ಕ್ರಮವಾಗಿ ಈಗಿರುವ ನಿಯಮಗಳ ಜೊತೆ ಹೊಸ ನಿಯಮಗಳನ್ನು ಸೇರಿಸಿ ರೂಲ್ಸ್ ಜಾರಿಗೆ ತರುತ್ತೇವೆ ಎಂದರು.
ಈಗಾಗಲೇ ಏರ್ ಪೋರ್ಟ್ ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜನಸಾಮಾನ್ಯರಿಗೆ, ವ್ಯಾಪಾರ-ವಹಿವಾಟಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.