ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಮತ್ತೆ ಬ್ರೇಕ್ ಬೀಳಲಿದೆಯೇ ಎಂಬ ಆತಂಕ ಎದುರಾಗಿದೆ. ಹೊಸ ವರ್ಷಕ್ಕೆ ಮಾಸ್ಕ್ ಕಡ್ಡಾಯ ನಿಯಮದ ಬಗ್ಗೆ ಶೀಘ್ರವೇ ನಿರ್ಧರಿಸುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೊಸ ವರ್ಷಕ್ಕೆ ಮಾಸ್ಕ್ ಕಡ್ಡಾಯ ವಿಚಾರ ಸರ್ಕಾರದ ಪರಿಶೀಲನೆಯಲ್ಲಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಹಿಂದೆ ಪ್ರತಿದಿನ 2-3 ಸಾವಿರ ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈಗ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಹೊಸ ವರ್ಷಾಚರಣೆಗೆ ನಿಯಮಗಳನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ತಿಳಿಸಿದರು.