alex Certify BIG NEWS: ಹೊಸ ವರ್ಷದ ಸಂಭ್ರಮಕ್ಕೆ ಸಂಪೂರ್ಣ ಬ್ರೇಕ್; ಬೆಂಗಳೂರಿನಲ್ಲಿ ಸಂಜೆಯಿಂದಲೇ ರೂಲ್ಸ್ ಜಾರಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವರ್ಷದ ಸಂಭ್ರಮಕ್ಕೆ ಸಂಪೂರ್ಣ ಬ್ರೇಕ್; ಬೆಂಗಳೂರಿನಲ್ಲಿ ಸಂಜೆಯಿಂದಲೇ ರೂಲ್ಸ್ ಜಾರಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ ಈ ಬಾರಿ ಕೂಡ ಹೊಸ ವರ್ಷದ ಸ್ವಾಗತ ಸಂಭ್ರಮಕ್ಕೆ ಬ್ರೇಕ್ ಬಿದ್ದಿದ್ದು, ಯಾರೂ ಕೂಡ ಮನೆಯಿಂದ ಹೊರ ಬಂದು ಸಂಭ್ರಮಿಸುವಂತಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ಕೋವಿಡ್ ಜತೆಗೆ ಒಮಿಕ್ರಾನ್ ಭೀತಿ ಕೂಡ ಹೆಚ್ಚಳವಾಗಿದೆ. ಎರಡನೇ ಅಲೆ ಆರಂಭದಲ್ಲಿ ನಾವು ಸ್ವಲ್ಪ ಉದಾಸೀನ ಮಾಡಿದ್ದರಿಂದ ಪರಿಸ್ಥಿತಿ ಕೈಮೀರಿ ಹೋಗುವ ಹಂತ ತಲುಪಿತು. ಹಾಗಾಗಿ ಈ ಬಾರಿ ಅಂತಹ ಎಡವಟ್ಟುಗಳು ಆಗಬಾರದು ಎಂಬ ಕಾರಣಕ್ಕೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕಡಿವಾಣ ಹಾಕಲಾಗಿದೆ ಎಂದರು.

BIG NEWS: ಬಾಸಿಸಮ್ ಬಿಡಿ, ವಿವೇಚನೆಯಿಂದ ಕೆಲಸ ಮಾಡಿ; ಡಿಸಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್

ರಾಜಧಾನಿ ಬೆಂಗಳೂರಿನಲ್ಲಿ ಸಂಜೆ 6 ಗಂಟೆಯಿಂದಲೇ ಟಫ್ ರೂಲ್ಸ್ ಜಾರಿಯಾಗಲಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಗಳನ್ನು ಬಂದ್ ಮಾಡಲಾಗುತ್ತದೆ. ನಗರದಾದ್ಯಂತ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಹಾಕಲಾಗುತ್ತದೆ. ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ. ಜನರು ಗುಂಪುಗೂಡುವಂತಿಲ್ಲ, ಹೊಸ ವರ್ಷ ಬಹಿರಂಗವಾಗಿ ಆಚರಿಸುವಂತಿಲ್ಲ. ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಇದ್ದು ಆಚರಿಸಬಹುದು. ಒಂದು ವೇಳೆ ನಿಯಮ ಮೀರಿ ಹೊರಗಡೆ ಓಡಾಡಿದರೆ ಅಂತವರ ವಿರುದ್ಧ ಎನ್ಡಿಎಂಎ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈಗಾಗಲೇ ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಮಾತ್ರವಲ್ಲ ನಮ್ಮ ರಾಜ್ಯದಲ್ಲಿಯೂ ಒಮಿಕ್ರಾನ್ ಕೇಸ್ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಗಂಭೀರತೆ ಅರಿತು ಜನರು ಸಹಕರಿಸಬೇಕು. ಇಂತಹ ಸಂದರ್ಭದಲ್ಲಿ ಹೊಸ ವರ್ಷಾಚರಣೆಗಿಂತ ಬದುಕು ಮುಖ್ಯವಾಗುತ್ತದೆ. ಆ ನಿಟ್ಟಿನಲ್ಲಿ ಜನರು ಜಾಗೃತರಾಗಬೇಕು ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...