ಉತ್ತರ ಪ್ರದೇಶದ ಲಖ್ನೋನಲ್ಲಿರೋ ಹೋಟೆಲ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದ್ದು, ಹೋಟೆಲ್‌ನಲ್ಲಿ ಸಿಲುಕಿದ್ದ ಸಿಬ್ಬಂದಿ ಮತ್ತು ಗ್ರಾಹಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ.
ಹಜರತ್‌ಗಂಜ್ ಪ್ರದೇಶದಲ್ಲಿರುವ ಲೆವಾನಾ ಎಂಬ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ದುರಂತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಅಂತಾ ಹೇಳಲಾಗ್ತಿದೆ. ಗಾಯಾಳುಗಳನ್ನು ಈಗಾಗ್ಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಹೋಟೆಲ್‌ನ ಸಿಬ್ಬಂದಿ ಹಾಗೂ ಗ್ರಾಹಕರಿಗೆ ಸುಟ್ಟ ಗಾಯಗಳಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಹೇಳಲಾಗ್ತಿದೆ. ಹೋಟೆಲ್‌ನ ಒಟ್ಟು 30 ಕೊಠಡಿಗಳ ಪೈಕಿ 18 ಕೊಠಡಿಗಳಲ್ಲಿ ಗ್ರಾಹಕರಿದ್ದರು. ಸುಮಾರು 35-40 ಮಂದಿ ಹೋಟೆಲ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಅವರನ್ನೆಲ್ಲ ಹೊರಕ್ಕೆ ಕರೆತರಲಾಗಿದೆ.
ಹೋಟೆಲ್‌ನ ಸುತ್ತ ಗಾಜು ಅಳವಡಿಸಿದ್ದರಿಂದ ಅದನ್ನು ಬೇಧಿಸಿ ಒಳನುಗ್ಗಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡಬೇಕಾಯ್ತು. ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.