alex Certify BIG NEWS: ಹೋರಾಟದ ಗುಣವಿದ್ದಿದ್ದಕ್ಕೆ ಅಂದು ದೇವೇಗೌಡರ ವಿರುದ್ಧ ನನ್ನ ಚುನಾವಣೆಗೆ ನಿಲ್ಲಿಸಿದ್ದು; ವಿರೋಧಿಗಳಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೋರಾಟದ ಗುಣವಿದ್ದಿದ್ದಕ್ಕೆ ಅಂದು ದೇವೇಗೌಡರ ವಿರುದ್ಧ ನನ್ನ ಚುನಾವಣೆಗೆ ನಿಲ್ಲಿಸಿದ್ದು; ವಿರೋಧಿಗಳಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಕಿಡಿಕಾರಿದ್ದ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಶೋಕಣ್ಣಗೆ ಬೆಂಗಳೂರು ನಗರದ ಬಗ್ಗೆ ಕಾಳಜಿ ಇಲ್ಲ, ಇದ್ದಿದ್ದರೆ ಇಂತಹ ಮಾತನಾಡುತ್ತಿರಲಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮೇಕೆ ಮಾಂಸ ತಿನ್ನಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಸಚಿವ ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮೇಕೆ ಮಾಂಸ ತಿನ್ನಲು ನಾವು ಪಾದಯಾತ್ರೆ ಮಾಡುತ್ತಿಲ್ಲ, ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಇದು ಕೇವಲ ಕಾಂಗ್ರೆಸ್ ನವರ ಹೋರಾಟವಲ್ಲ, ಪಕ್ಷಾತೀತವಾಗಿ ಈ ಹೋರಾಟದಲ್ಲಿ ಭಾಗವಹಿಸಬಹುದು. ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಕೂಡ ಪಾದಯಾತ್ರೆಗೆ ಆಹ್ವಾನಿಸುತ್ತೇವೆ ಎಂದರು.

ಗುಡ್​ ನ್ಯೂಸ್​: ಕಮರ್ಷಿಯಲ್​ ಸಿಲಿಂಡರ್​ಗಳ ಬೆಲೆಯಲ್ಲಿ 102.50 ರೂಪಾಯಿ ಇಳಿಕೆ

ಆರ್.ಅಶೋಕ್ ಅವರಿಗೆ ಬೆಂಗಳೂರಿನ ಬಗ್ಗೆ ಕಾಳಜಿ ಇಲ್ಲ, ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಮೇಕೆದಾಟು ಯೋಜನೆಗೆ ಡಿಪಿಆರ್ ಕಳುಹಿಸಲಾಗಿತ್ತು. ಹಸಿರು ನ್ಯಾಯಾಧಿಕರಣ ಡಿಪಿಆರ್ ಗೆ ಕ್ಲಿಯರೆನ್ಸ್ ಕೊಡಬೇಕು. ಎಲ್ಲರೂ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಯೋಜನೆಗೆ ಒತ್ತಾಯಿಸಬೇಕಿದೆ ಎಂದರು.

ಮೇಕೆದಾಟು ಪಾದಯಾತ್ರೆ ಮೂಲಕ ಡಿಕೆಶಿ ವೈಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂಬ ರಾಜಕೀಯ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಯಾವುದೇ ವೈಯಕ್ತಿಕ ವರ್ಚಸ್ಸು ಇಲ್ಲ, ನನ್ನಲ್ಲಿ ಹೋರಾಟದ ಒಂದು ಸಣ್ಣ ಗುಣವಿದೆ ಎಂದೇ ಅಂದು ದೇವೇಗೌಡರ ಎದುರು ನನ್ನನ್ನು ಚುನಾವಣೆಗೆ ನಿಲ್ಲಿಸಿದರು. ನಾನು ಅಂದು ಚುನಾವಣೆಯಲ್ಲಿ ಸೋತಿರಬಹುದು. ಆದರೆ ಅಂತಹ ಹೋರಾಟಗಾರರ ವಿರುದ್ಧ ನಾನು ಸ್ಪರ್ಧೆಗೆ ನಿಂತಿದ್ದೆ ಎಂದರೆ ನನ್ನ ಹೋರಾಟದ ಗುಣ ಅದಕ್ಕೆ ಕಾರಣ. ಇಲ್ಲಿಯವರೆಗೂ ನಾನು ಬಂದಿದ್ದು ಹೋರಾಟದ ಮೂಲಕವೇ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...