ಬೆಂಗಳೂರು: ವಿದ್ಯಾರ್ಥಿಗಳಿಗೆ ಇಂದು ಕೋವಿಡ್ ನಿಂದ ಸ್ವಾತಂತ್ರ್ಯ ಸಿಕ್ಕಿದೆ. ಖುಷಿ ಖುಷಿಯಾಗಿ ತರಗತಿಗಳಿಗೆ ಬಂದಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇಂದಿನಿಂದ 9-12ನೇ ತರಗತಿಗಳ ಭೌತಿಕ ಕ್ಲಾಸ್ ಆರಂಭ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ನ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳ ಜೊತೆ ಚರ್ಚಿಸಿದರು.
ಗ್ರಾಹಕರಿಂದ ಅವಮಾನಿತನಾದ ಸಲಿಂಗಿ ವೇಟರ್ ಗೆ ಹರಿದುಬಂತು ಭಾರಿ ದೇಣಿಗೆ
ಬಳಿಕ ಮಾತನಾಡಿದ ಸಿಎಂ, ನಮಗೆ ಮಕ್ಕಳ ಆರೋಗ್ಯ ಮುಖ್ಯ. ಎಲ್ಲರೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಂದು ತರಗತಿಗಳು ಆರಂಭವಾಗಿರುವುದರಿಂದ ಮಕ್ಕಳಿಗೆ ಕೋವಿಡ್ ನಿಂದ ಸ್ವಾತಂತ್ರ್ಯ ಸಿಕ್ಕಷ್ಟು ಸಂತಸವಾಗಿದೆ. ಕೋವಿಡ್ ಕಡಿಮೆಯಾದರೆ ಗಡಿ ಜಿಲ್ಲೆಗಳಲ್ಲಿ ಶಾಲೆ ಆರಂಭಿಸಲಾಗುವುದು. 1-8ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲಹೆ ಕೇಳಿದ್ದೇವೆ. ಅವರ ಸಲಹೆ ಆಧರಿಸಿ ಶಾಲೆ ಆರಂಭಿಸುವ ಬಗ್ಗೆ ಶೀಘ್ರವೇ ನಿರ್ಧರಿಸಲಾಗುವುದು ಎಂದರು.