ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುಳಿವು ನೀಡಿದ್ದಾರೆ.
1-8 ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ತಜ್ಞರು ಗ್ರೀನ್ ಸಿಗ್ನಲ್ ನೀಡಿದರೆ ಸೆಪ್ಟೆಂಬರ್ ಮೊದಲ ವಾರದಿಂದಲೇ ಶಾಲೆಗಳನ್ನು ಪುನರಾರಂಭಿಸಲಾಗುವುದು ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಆಸ್ಪತ್ರೆಗೆ ನುಗ್ಗಿದ ಚಿರತೆ ಮರಿಗಳು, ಹೌಹಾರಿದ ಸಿಬ್ಬಂದಿ – ರೋಗಿಗಳು
ಈ ಬಗ್ಗೆ ನಾಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ತಜ್ಞರ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.