ಬೆಂಗಳೂರು : ವಿಫಲವಾದ ಬೋರ್’ವೆಲ್ ಗಳನ್ನು ಮುಚ್ಚದಿದ್ರೆ 1 ವರ್ಷ ಜೈಲು ಶಿಕ್ಷೆ ವಿಧಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ನಿನ್ನೆ ಮಂಡಿಸಲಾಗಿದೆ.
ಹೌದು, ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ಅವಘಡ ಸಂಭವಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಯನ್ನು ಸಚಿವ ಎನ್ ಎಸ್ ಬೋಸರಾಜು ಅವರು ಮಂಡಿಸಿದರು.ಕರ್ನಾಟಕ ಅಂತರ್ಜಲ ( ನಿಯಮಾವಳಿ ಮತ್ತು ಅಭಿವೃದ್ದಿ, ನಿರ್ವಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ 2024 ವಿಧೇಯಕವನ್ನು ಅಂಗೀಕರಿಸಲಾಯಿತು.
ಸರ್ಜಾಪುರದಲ್ಲಿ ‘ಸ್ವಿಫ್ಟ್ ಸಿಟಿ’ ನಿರ್ಮಾಣ
ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡಲು ಬೆಂಗಳೂರಿನ ಸರ್ಜಾಪುರದಲ್ಲಿ ‘ಸ್ವಿಫ್ಟ್ ಸಿಟಿ’ ನಿರ್ಮಿಸಲಾಗುತ್ತಿದೆ. ಇಲ್ಲಿ 150 ಮೀಟರ್ ಅಗಲದ ಸಂಪರ್ಕ ರಸ್ತೆ ಒಳಗೊಂಡ ವಿಶ್ವದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ. ಬಿ. ಪಾಟೀಲ್ ಅವರು ತಿಳಿಸಿದ್ದಾರೆ.