ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ಆರಂಭಿಸಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಸಜ್ಜಾಗುತ್ತಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಇಂದು ರೈತರೊಂದಿಗೆ ಸಂವಾದ ನಡೆಸುವ ಮೂಲಕ ಚುನಾವಣೆಯಲ್ಲಿ ರೈತರಿಗೆ ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ.
ರೈತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಮುಂದಿನ ಚುನಾವಣೆಯಲ್ಲಿ 10 ಕ್ಷೇತ್ರಗಳಲ್ಲಿ ರೈತ ಹೋರಾಟಗಾರರನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ರೈತರು ವಿಧಾನಸೌಧಕ್ಕೆ ಬಂದು, ರೈತರ ಪರ ಧ್ವನಿ ಎತ್ತಬೇಕಿದೆ ಎಂದು ಹೇಳಿದರು.
ಕಾಲೇಜು ಬೋಧಕ/ಬೋಧಕೆತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸೆಲಿಂಗ್ ಆದೇಶ ಪ್ರಕಟ
ಜೆಡಿಎಸ್ ಗೆ ಬೆಂಬಲ ನೀಡಿ ಅಧಿಕಾರಕ್ಕೆ ತಂದರೆ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇನೆ. ಒಂದು ವೇಳೆ ಸಾಧ್ಯವಾಗದಿದ್ದರೆ ಜೆಡಿಎಸ್ ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದು ಹೇಳಿದರು.
ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ರಾಜಕೀಯ ನಿವೃತ್ತಿ ಪಡೆದುಕೊಳ್ಳೋಣ ಎಂದುಕೊಂಡಿದ್ದೆ. ಆದರೆ ನಮ್ಮ ಕಾರ್ಯಕರ್ತರಿಗಾಗಿ ರಾಜಕೀಯದಲ್ಲಿ ಇದ್ದೇನೆ ಎಂದರು. ರಾಜ್ಯದಲ್ಲಿ ಇಂದು ಕೋಮುಗಲಭೆಗಳು ಆರಂಭವಾಗಿವೆ. ಎರಡೂ ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ಗಾಗಿ ಜಾತಿ ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ನನ್ನ ಅವಧಿಯಲ್ಲಿ ಕೋಮುಗಲಭೆಗಳಿಗೆ ಅವಕಾಶ ನೀಡಿರಲಿಲ್ಲ ಎಂದು ಹೇಳಿದರು.