ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಮಾತ್ರ ಬಾಕಿಯಿದ್ದು, ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚುನವಣಾ ಆಯೋಗ ಯಾವುದೇ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ರಾಜ್ಯಾದ್ಯಂತ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ, ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅಕ್ರಮ ಹಣ, ವಸ್ತು, ಮದ್ಯ ಸಾಗಾಟಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಕಳೆದ 10 ದಿನಗಳಲ್ಲಿ ಚುನಾವಣಾಧಿಕಾರಿಗಳು ಬರೋಬ್ಬರಿ 100 ಕೋಟಿಯಷ್ಟು ನಗದು ಹಾಗೂ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ನೀತಿ ಸಂಹಿತೆ ಮಾರ್ಚ್ 29ರಿಂದ ಜಾರಿಯಲ್ಲಿದ್ದು, ಅಂದಿನಿಂದ ಈವರೆಗೆ 36.8 ಕೋಟಿ ಹಣ, 15.46 ಕೋಟಿ ಉಚಿತ ವಸ್ತುಗಳು, 30 ಕೋಟಿ ಬೆಲೆಯ 5.2 ಲಕ್ಷ ಲೀಟರ್ ಮದ್ಯ, 15 ಕೋಟಿ ಬೆಲೆಯ ಬಂಗಾರ ಹಾಗೂ 2.5 ಕೋಟಿ ಬೆಲೆಯುಳ್ಳ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾಧಿಕರಿಗಳು ತಿಳಿಸಿದ್ದಾರೆ.