ಬೆಂಗಳೂರು : ವಯನಾಡು ಸಂತ್ರಸ್ತರಿಗೆ ರಾಜ್ಯ ಸರ್ಕಾರ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ನಾನು ಸಿಎಂ ಪಿಣರಾಯಿ ವಿಜಯನ್ ಅವರಿಗೆ ಭರವಸೆ ನೀಡಿದ್ದೇನೆ , ನಮ್ಮ ಬೆಂಬಲದಿಂದ ಕರ್ನಾಟಕವು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಲಿದೆ. ಒಟ್ಟಾಗಿ, ನಾವು ಭರವಸೆಯನ್ನು ಪುನರ್ನಿರ್ಮಿಸುತ್ತೇವೆ ಮತ್ತು ಪುನಃಸ್ಥಾಪಿಸುತ್ತೇವೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಭೇಟಿನೀಡಿ ಸಿಎಂ ಸಿದ್ದರಾಮಯ್ಯ ಸಂತ್ರಸ್ತರ ಅಹವಾಲು ಆಲಿಸಿದರು. ಈ ವೇಳೆ ರಸ್ತೆ ಮತ್ತು ಮನೆಗಳ ದುರಸ್ತಿ, ಬೆಳೆ ಹಾನಿ ಬಗ್ಗೆ ಕಾಫಿ ಬೋರ್ಡ್ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಬೇಕು ಎಂಬ ಸೂಚನೆ ನೀಡಿದ್ದೇನೆ. ಇದರ ಜೊತೆಗೆ ಜಿಲ್ಲೆಯ ಪ್ರವಾಹ ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯಪಾಲರಯ ನೋಟೀಸ್ ಹಿಂಪಡೆಯುತ್ತಾರೆಂಬ ವಿಶ್ವಾಸವಿದೆ
ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗ ಮಾಡಿಕೊಂಡು ಏಳು ಕೋಟಿ ಕನ್ನಡಿಗರ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದಿರುವ ಸದೃಢ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿದೆ. ರಾಜ್ಯಪಾಲರು ನೀಡಿರುವ ನೋಟೀಸ್ ಕಾನೂನು ಬಾಹಿರ. ಅದನ್ನು ಹಿಂಪಡೆಯಬೇಕು ಎಂದು ಸಂಪುಟ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿದೆ. ಹೀಗಾಗಿ ಅವರು ತಮ್ಮ ನೋಟೀಸನ್ನು ಹಿಂಪಡೆಯುತ್ತಾರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.