ಬೆಳಗಾವಿ : ರಾಜ್ಯದ 100 ಮದರಸಾಗಳಲ್ಲಿ ಎರಡು ವರ್ಷ ಕನ್ನಡ, ಇಂಗ್ಲಿಷ್, ವಿಜ್ಞಾನ ಹಾಗೂ ಇತರ ವಿಷಯಗಳನ್ನು ಪ್ರಾಯೋಗಿಕವಾಗಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಬೈರೇಗೌಡ ಅವರು, ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ನೋಂದಾಯಿತ ವಕ್ಫ್ ಆಸ್ತಿಗಳಲ್ಲಿ ಹಾಗೂ ವಕ್ಫ್ ಸಂಸ್ಥೆಗಳು ನಡೆಸುತ್ತಿರುವ ಮದರಸಾಗಳಲ್ಲಿ ಕನ್ನಡ,ಇಂಗ್ಲಿಷ್, ವಿಜ್ಞಾನ ಹಾಗೂ ಗಣಿತ ವಿಷಯಗಳನ್ನು ಬೋಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮದರಸಾಗಳಲ್ಲಿ ಎರಡು ವರ್ಷಗಳ ಕಾಲ ಬೋಧಿಸಿ ಎಸ್ ಎಸ್ ಎಲ್ ಸಿ, ಪಿಯುಸಿ ಮತ್ತು ಪದವಿಯನ್ನು ರಾಜ್ಯ/ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ ದೂರ ಶಿಕ್ಷಣದ ಮೂಲಕ ಕೈಗೊಳ್ಳಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.