ಬೆಳಗಾವಿ : ಗ್ರಾಮೀಣಾಭಿವೃದ್ಧಿ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜ್ ಇಲಾಖೆಯಲ್ಲಿ ವರ್ಗಾವಾರು ಕಾರ್ಯನಿರ್ವಹಿಸುತ್ತಿರುವ ಇಲಾಖೆಯಲ್ಲಿ ಎಲ್ಲಾ ವೃಂದದ ಮತ್ತು ಖಾಲಿ ಇರುವ ಅಧಿಕಾರಿ ಹುದ್ದೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಎಸ್. ಎಲ್ ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಒಟ್ಟು 10,341 ಹುದ್ದೆಗಳಿದ್ದು, ಗ್ರೂಪ್-ಎ 207 ಹುದ್ದೆಗಳು, ಗ್ರೂಪ್ –ಬಿ 755 ಹುದ್ದೆಗಳು, ಗ್ರೂಪ್ –ಸಿ 7885 ಹುದ್ದೆಗಳು, ಗ್ರೂಪ್ –ಡಿ 1494ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಈ ಕೆಳಕಂಡ ತಾಂತ್ರಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದೆ:-
- ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಒಟ್ಟು 25 ಹುದ್ದೆಗಳು: 18+07 ಹೈ.ಕ. ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಿನಾಂಕ:22.09.2023ರಂದು ಪ್ರಕಟಿಸಲಾಗಿದೆ.
- ಸಹಾಯಕ ಇಂಜಿನಿಯರ್ (ಗ್ರೇಡ್-1)ಒಟ್ಟು 288 ಹುದ್ದೆಗಳು:
229+56 ಹೈ.ಕ. ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಿನಾಂಕ:17.09.2023ರಂದು ಪ್ರಕಟಿಸಲಾಗಿದೆ.
ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ, ಕಲ್ಯಾಣ ಕರ್ನಾಟಕ ವೃಂದದ ನೇರ ನೇಮಕಾತಿ ಕೋಟಾದಡಿ ಲಭ್ಯವಿರುವ ಒಟ್ಟು 170 ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಂಗಳೂರು ಇವರಿಗೆ ತಿಳಿಸಲಾಗಿದೆ.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ:-
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಈ ಕೆಳಕಂಡ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ವಿಕಲ ಚೇತನರಿಗೆ ಮೀಸಲಾತಿಗಾಗಿ ರೋಷರ್ ಬಿಂದುವನ್ನು ಗುರುತಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗೆ ದಿನಾಂಕ:01.07.2023 ರಂದು ಪ್ರಸ್ತಾವನೆ ಕಳುಹಿಸಲಾಗಿದೆ. ಸದರಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ ನಂತರ ಆರ್ಥಿಕ ಇಲಾಖೆಯ ಸಹಮತಿ ಪಡೆದು ನೇಮಕಾತಿ ಪ್ರಸ್ತಾವನೆಯನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.