ಕಾರವಾರ: 108 ಆಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆಯಾಗಿದ್ದು, ಇನ್ನೆರಡು ತಿಂಗಳಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 108 ಆಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆಯಾಗಿದ್ದು, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಅದಕ್ಕಾಗಿ ಮುಂದುವರೆದ ರಾಷ್ಟ್ರಗಳಲ್ಲಿನ ಸೇವೆಗಳ ಬಗ್ಗೆ ವರದಿ ನೀಡುವಂತೆ ತಾಂತ್ರಿಕ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ 108 ಆಂಬುಲೆನ್ಸ್ ನ್ನು ಸತ್ಯಂ ಎಂಬ ಕಂಪನಿ ನಿರ್ವಹಿಸುತ್ತಿತ್ತು. ಕಂಪನಿ ಲಾಸ್ ಆದ ಬಳಿಕ ಜಿವಿಕೆ ಸಂಸ್ಥೆ ಇದನ್ನು ನಿರ್ವಹಿಸುತ್ತಿದೆ. ಮೊದಲು ಸೇವೆಯನ್ನು ಚನ್ನಾಗಿ ಸಂಸ್ಥೆ ನಿರ್ವಹಿಸುತ್ತಿತ್ತು. ಇತ್ತೀಚೆಗೆ ಆಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆಯಾಗಿದೆ. ಇನ್ನೆರಡು ತಿಂಗಳಲ್ಲಿ ಸಮಸ್ಯೆ ಸರಿಪಡಿಸಲಾಗುವುದು ಎಂದು ಹೇಳಿದರು.