ಬೆಂಗಳೂರು: ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ 108 ಆಂಬುಲೆನ್ಸ್ ಸೇವೆ ರಾಜ್ಯಾದ್ಯಂತ ಪುನರಾರಂಭವಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ತಾಂತ್ರಿಕ ದೋಷದ ಕಾರಣದಿಂದ ಸ್ಥಗಿತಗೊಂಡಿದ್ದ 108 ಆಂಬುಲೆನ್ಸ್ ಸೇವೆ ಮಧ್ಯಾಹ್ನ 2 ಗಂಟೆಯಿಂದ ಮತ್ತೆ ಆರಂಭವಾಗಿದೆ. ಬ್ಯಾಕಪ್ ಸರ್ವರ್ ಕೆಲಸ ಮಾಡುತ್ತಿದೆ. ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗಿದ್ದಕ್ಕೆ ರಾಜ್ಯದ ಜನತೆಯ ಕ್ಷಮೆ ಯಾಚಿಸುತ್ತೇನೆ ಎಂದರು.
ಐಟಿ ಹಾರ್ಡ್ ವೇರ್ ವೈರಸ್ ನಿಂದ ತಾಂತ್ರಿಕ ಸಮಸ್ಯೆಯಾಗಿತ್ತು. 2008ರಲ್ಲಿ ಅಳವಡಿಸಿದ್ದ ಸಿಸ್ಟಮ್ ನಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ. ಮದರ್ ಬೋರ್ಡ್ ನಾಳೆ ಸರಿಯಾಗಲಿದೆ. ಇನ್ನೊಂದು ಮದರ್ ಬೋರ್ಡ್ ಖರೀದಿಸಿ ಅಳವಡಿಸಲಾಗುತ್ತದೆ ಎಂದು ಹೇಳಿದರು.