
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 11 ಜನರ ವಿರುದ್ಧ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಾಗೂ ಬಹಿರಂಗ ಹೇಳಿಕೆಗಳನ್ನು ನೀಡಿದವರ ಒಟ್ಟು 11 ಜನರ ವಿರುದ್ಧ ನೋಟಿಸ್ ನೀಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಬಹಿರಂಗ ಹೇಳಿಕೆ ನೀಡಿದವರನ್ನು ಕರೆದು ಮಾತನಾಡಿದ್ದೇವೆ ಇನ್ಮುಂದೆ ಇಂತಹ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದು ಹೇಳಿದರು.