BIG NEWS: 110 ಕ್ಷೇತ್ರಗಳಲ್ಲಿ ಪ್ರಜಾಕೀಯ ಪಕ್ಷದ ಉತ್ತಮ ಅಭ್ಯರ್ಥಿಗಳ ಸ್ಪರ್ಧೆ; ಪಕ್ಷವೂ ನಿಮ್ಮದೇ ಅಧಿಕಾರವೂ ನಿಮ್ಮದೇ ಎಂದ ಉಪೇಂದ್ರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಒಂಭತ್ತು ದಿನಗಳು ಮಾತ್ರ ಬಾಕಿಯಿದ್ದು, ನಟ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಪಕ್ಷ ಉತ್ತಮ ಪ್ರಜಾಕೀಯ ಪಕ್ಷದಿಂದ 110 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅಭ್ಯರ್ಥಿಗಳ ಪರಿಚಯ ಮಾಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಉಪೇಂದ್ರ, ಇದು ವಿಚಾರಗಳ ಪ್ರಚಾರ. ಹಳ್ಳಿ ಹಳ್ಳಿಗಳಿಗೂ ಇಂದು ಪ್ರಜಾಕಿಯ ತಲುಪಿದೆ. 110 ಕ್ಷೇತ್ರಗಳಲ್ಲಿ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷವೂ ನಿಮ್ಮದೇ ಅಧಿಕಾರವೂ ನಿಮ್ಮದೇ. ಜನರ ಬೇಡಿಕೆ ನಮಗೆ ಗೊತ್ತಿದೆ. ಪಾರದರ್ಶಕ ವರದಿ ಕೊಡುತ್ತೇವೆ. ಪ್ರಜಾಕೀಯ ಕೇವಲ ನಮಗೆ ವೋಟ್ ಹಾಕಿ ಎಂದು ಹೇಳುತ್ತಿಲ್ಲ. ನಿರಂತರವಾಗಿ ಜನರ ಜೊತೆ ಸಂಪರ್ಕದಲ್ಲಿ ಇರುತ್ತೆವೆ. ಅವರ ಕುಂದುಕೊರತೆ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read