alex Certify BIG NEWS: 112 ದಿನಗಳ ಬಳಿಕ ಕರ್ನಾಟಕದ ‘ಕೊರೊನಾ’ ಕೇಸ್ ಗಳಲ್ಲಿ ಏಕಾಏಕಿ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 112 ದಿನಗಳ ಬಳಿಕ ಕರ್ನಾಟಕದ ‘ಕೊರೊನಾ’ ಕೇಸ್ ಗಳಲ್ಲಿ ಏಕಾಏಕಿ ಹೆಚ್ಚಳ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಈಗ ಮತ್ತೆ ಏರಿಕೆಯಾಗಿದೆ. 112 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ ಆರು ನೂರಕ್ಕೂ ಅಧಿಕ ಕೇಸ್ ಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ 648 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಅತಿಹೆಚ್ಚು ಅಂದರೆ 605 ಪ್ರಕರಣಗಳು ವರದಿಯಾಗಿದ್ದು, ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,843 ಕ್ಕೆ ಏರಿಕೆಯಾಗಿದೆ.

ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲಿ 12 ಕೊರೊನಾ ಸೋಂಕಿನ ವರದಿಯಾಗಿದ್ದು, ಇನ್ನುಳಿದಂತೆ ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕೊಡಗು, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ಉಡುಪಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...