ಬೆಂಗಳೂರು : 2022-2023 ನೇ ಸಾಲಿನ ನಡೆದಿರುವ 11,894 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ.
11,894 ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಶಿಕ್ಷಕರ ನೇಮಕಾತಿಯು ಸುಪ್ರೀಂಕೋರ್ಟ್ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. ತಂದೆ ಅಥವಾ ಗಂಡನ ಆದಾಯ ಪ್ರಮಾಣ ಪತ್ರ ಪರಿಗಣಿಸಬೇಕೇ ಎಂಬ ಗೊಂದಲ ನ್ಯಾಯಾಲಯದ ಕಟಕಟೆಯಲ್ಲಿದ್ದು, ಹೈಕೋರ್ಟ್ ತಂದೆಯ ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಲು ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್ ನೇಮಕಾತಿಗೆ ತಡೆ ನೀಡಿದೆ.
ರಾಜ್ಯ ಸರ್ಕಾರದ ಮನವಿ ಆಲಿಸಿರುವ ಸುಪ್ರೀಂಕೋರ್ಟ್ ತನ್ನ ತೀರ್ಪಿಗೆ ಬದ್ಧವಾಗಿ ನೇಮಕಗೊಂಡ ಶಿಕ್ಷಕರ ಪಠ್ಯ ಚಟುವಟಿಕೆ ಮುಂದುವರೆಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಿದೆ.