ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ನಾಳೆ ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ. ಸಫಾರಿ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಡಿಪುರ ಮಾರ್ಗದಲ್ಲಿ ಹಲವು ಬದಲಾವಣೆ ಮಾಡಲಾಗಿದೆ.
ದೇಶದ 12 ಹುಲಿ ಯೋಜನೆಗಳ ನಿರ್ದೇಶಕರ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಡೀಪುರ ಹಾಗೂ ಮಧುರೈ ಮಾರ್ಗವಾಗಿ ಸಂಚರಿಸುವ ಎಲ್ಲಾ ವಾಹನಗಳ ತಪಾಸಣೆಯನ್ನು ನಡೆಸಲಾಗಿದೆ. ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇಂದು ಸಂಜೆ 4 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ಬಂಡೀಪುರ ಮಾರ್ಗವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 181 ಹಾಗೂ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದೆ