ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಿಹಿಸುದ್ದಿ ನೀಡಿದ್ದು, ಈ ವರ್ಷ ರಾಜ್ಯದಲ್ಲಿ 70,950 ಉದ್ಯೋಗವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ 12 ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಒಡಂಬಡಿಕೆಗಳು ಏರ್ಪಟ್ಟಿದ್ದು, ಇದರಿಂದ ಭವಿಷ್ಯದಲ್ಲಿ 70,950 ಉದ್ಯೋಗವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.