ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಬೆನ್ನಲ್ಲೇ 14 ಜನ ಬಂಡಾಯ ಬಿಜೆಪಿ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ್, 14 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ 14 ಜನರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದರು.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಪ್ತ ರಾಜು ಸೇರಿ 14 ಜನರನ್ನು ಉಚ್ಛಾಟನೆ ಮಾಡಲಾಗಿದೆ. ಅ.28ರಂದು ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ.