ಚಾಮರಾಜನಗರ: ಗುಮ್ಮಕಲ್ಲು ದುರಂತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮುಂದಾಗಿದೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, 15 ದಿನಗಳೊಳಗೆ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸುತ್ತೇವೆ. ಪ್ರಭಾವಿಗಳ ಕ್ವಾರಿಗಳ ವಿರುದ್ಧವೂ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿಐಪಿ ಪಾರ್ಕಿಂಗ್ ಪ್ರದೇಶದಿಂದ ಕಾರ್ ತೆಗೆದಿದ್ದಕ್ಕೆ ಗರಂ; ಪೊಲೀಸ್ ಅಧಿಕಾರಿಯೊಂದಿಗೆ ಮಿನಿಸ್ಟರ್ ಟಾಕ್ ಫೈಟ್…!
ಒಂದು ತಿಂಗಳ ಕಾಲ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲಾಗುವುದು. ನಾಳೆಯಿಂದಲೇ ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಕ್ವಾರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮ ಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ಸ್ಥಳದಲ್ಲೇ ಕ್ರಮಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.