ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಬೆಳ್ಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ಸಮರ ಸಾರಿದ್ದು, ರಾಜ್ಯದ 68 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ದಾಳಿ ಕುರಿತು ಎಸಿಬಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, 15 ಭ್ರಷ್ಟ ಅಧಿಕಾರಿಗಳ ವಿರುದ್ಧ 408 ಎಸಿಬಿ ಅಧಿಕಾರಿಗಳು 68 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ಅಕ್ರಮ ದಾಖಲೆಗಳು, ನಗದು ಹಣ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದೆ.
ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರು ಯಾವುದು ಗೊತ್ತಾ….?
ಸಕಾಲ ಕೆ ಎ ಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆ ಫಿಜಿಯೋಥೆರಪಿಸ್ಟ್ ರಾಜಶೇಖರ್, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ.
ಮಂಗಳೂರಿನ ಸ್ಮಾರ್ಟ್ ಸಿಟಿ ಇಇ ಕೆ. ಎಸ್.ಲಿಂಗೇಗೌಡ, ಮಂಡ್ಯ ಹೆಚ್ ಎಲ್ ಬಿ ಸಿ ಇಇ ಕೆ.ಶ್ರೀನಿವಾಸ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮಿನರಸಿಂಹಯ್ಯ, ಮಾಜಿ ಮಾನ್ಯೇಜರ್ ವಾಸುದೇವ್, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಬೆಳಗಾವಿಯ ಹೆಸ್ಕಾಂ ಅಧಿಕಾರಿ ನೇತಾಜಿ ಪಾಟೀಲ್, ಆರ್ ಟಿ ಒ ವೆಹಿಕಲ್ ಇನ್ಸ್ ಪೆಕ್ಟರ್ ಸದಾಶಿವ ಮರಲಿಂಗಣ್ಣನವರ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಾಸ್ತಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.