ಬೆಂಗಳೂರು: ರಾಜ್ಯದಲ್ಲಿ ಬಂಧಿಸಲ್ಪಟ್ಟಿದ್ದ 15 ಪಿಎಫ್ಐ ಮುಖಂಡರ ವಿರುದ್ಧ ಯುಎಪಿಎ ಅಡಿ ಕೇಸ್ ದಾಖಲಿಸಲು ಬೆಂಗಳೂರಿನ 10ನೇ ಎಸಿಎಂಎಂ ಕೋರ್ಟ್ ಸಮ್ಮತಿ ಸೂಚಿಸಿದೆ.
ಬಂಧಿತ 15 ಪಿಎಫ್ಐ ಮುಖಂಡರ ವಿರುದ್ಧ ಯುಎಪಿಎ ಕೇಸ್ ದಾಖಲಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಪೊಲಿಸರ ಮನವಿ ಪುರಸ್ಕರಿಸಿದ ನ್ಯಾಯಾಲಯ ಕಾನೂನು ಬಾಹಿರ ಚಟುವಟಿಕೆ ನಿಷೇಧ ಕಾಯ್ದೆಯಡಿ ಕೇಸ್ ದಾಖಲಿಸಲು ಅನುಮತಿ ನೀಡಿದೆ. ಅಲ್ಲದೇ ಅಕ್ಟೋಬರ್ 6ಕ್ಕೆ ಮುಂದಿನ ವಿಚಾರಣೆ ಮುಂದೂಡಿದೆ.
ಯುಎಪಿಎ ಕೇಸ್ ದಾಖಲು ಹಿನ್ನೆಲೆಯಲ್ಲಿ ಅ.6ರಂದು ಎನ್ಐಎ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ಅಂದು 15 ಜನ ಬಂಧಿತರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.