ಜೈಪುರ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬ್ಲಾಕ್ ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ 8 ಜನರ ವಿರುದ್ಧ ರಾಜಸ್ಥಾನದ ಅಲ್ವಾರ್ ನ ಕಿಶನ್ ಗಢ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಯ ಮೇಲೆ 8 ಜನ ಕಾಮುಕರು ಪೈಶಾಚಿಕ ಕೃತ್ಯವೆಸಗಿದ್ದು, ಬಳಿಕ ವಿಡಿಯೋ ಇಟ್ಟುಕೊಂಡು ಪದೇ ಪದೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 10 ತಿಂಗಳ ಹಿಂದೆ ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಅಂದಿನ ವಿಡಿಯೋ ಇಟ್ಟುಕೊಂಡು ಈಗ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎನ್ನಲಾಗಿದೆ.
ಪೊಲೀಸರು ಹೇಳುವ ಪ್ರಕಾರ ಈಗಾಗಲೇ ಬಾಲಕಿ ಹಾಗೂ ಮನೆಯವರಿಗೆ ವಿಡಿಯೋ ಬಿಡುಗಡೆ ಮಾಡುವುದಾಗಿ ಹೇಳಿ ಬೆದರಿಕೆ ಹಾಕಿ 50 ಸಾವಿರ ರೂಪಾಯಿ ವಸೂಲಿ ಮಾಡಿದ್ದಾರೆ. ಇದೀಗ ಮತ್ತೆ ವಿಡಿಯೋ ತೋರಿಸಿ ಇಂಟರ್ ನೆಟ್ ನಲ್ಲಿ ಅಪ್ ಲೋಡ್ ಮಾಡುವುದಾಗಿ ಹೇಳಿ ಬೆದರಿಕೆ ಹಾಕುತ್ತಿದ್ದು, 2.5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಸಾಮೂಹಿಕ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ಹಿನ್ನೆಲೆಯಲ್ಲಿ ಅರ್ಬಾಜ್, ಜಾವೇದ್, ಮುಸ್ತಕಿಮ್, ತಲೀಮ್, ಸಲ್ಮಾನ್, ಅಕ್ರಮ, ಸಾಹಿಲ್ ಮತ್ತು ಅಕ್ರಮ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.