alex Certify BIG NEWS: 2 ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡ; ಮಾಜಿ ಸಿಎಂ HDK ಹೇಳಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2 ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡ; ಮಾಜಿ ಸಿಎಂ HDK ಹೇಳಿದ್ದೇನು….?

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಜೆಡಿಎಸ್ ನಾಯಕರು, ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಚೆನ್ನಪಟ್ಟಣದ ಜೊತೆಗೆ ಮಂಡ್ಯ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಂಡ್ಯ ಜೆಡಿಎಸ್ ಮುಖಂಡರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಮಂಡ್ಯದಿಂದ ಸ್ಪರ್ಧೆ ಮಾಡಿದರೆ ಜಿಲ್ಲೆಗೆ ದೊಡ್ಡ ಶಕ್ತಿ ಬರುತ್ತೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬಹುದು. ನಾವೇ ಹಾಲಿ ಶಾಸಕರ ಮನವೊಲಿಕೆ ಮಾಡುತ್ತೇವೆ ಎಂದಿದ್ದಾರೆ.

ರಾಮನಗರ, ಮಂಡ್ಯ ಜಿಲ್ಲೆಯನ್ನು ನಾನು ಯಾವತ್ತೂ ಬಿಡುವುದಿಲ್ಲ. ಆದರೆ ಈ ಬಾರಿ ಚೆನ್ನಪಟ್ಟಣದಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದೇನೆ. ಹಾಲಿ ಶಾಸಕರೇ ಮಂಡ್ಯ ಕ್ಷೇತ್ರದ ಬಗ್ಗೆ ತೀರ್ಮಾನ ಮಾಡ್ತಾರೆ. ಸಧ್ಯಕ್ಕೆ ನಾನು ಮಂಡ್ಯ ಕ್ಷೇತ್ರಕ್ಕೆ ಅನಿವಾರ್ಯವಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...