ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜ್ಯ ಪ್ರವಾಸದ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಕುರ್ಚಿ ಭ್ರಮೆಯಲ್ಲಿ ಕಾದಾಟ ನಡೆಸುತ್ತಿರುವ ಸಿದ್ದರಾಮಾಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಒಗ್ಗೂಡಿಸಲು ವರ್ಷವೂ ಸಾಲಲ್ಲ ಎಂದು ಟೀಕಿಸಿದ್ದಾರೆ.
ಮಗನ ರಾಜಕೀಯ ಭವಿಷ್ಯಕ್ಕಾಗಿ ಎರಡು ದಿನದ ಮಟ್ಟಿಗೆ ಕರ್ನಾಟಕಕ್ಕೆ ಆಗಮಿಸಿರುವ ಸೋನಿಯಾ ಗಾಂಧಿಯವರಿಗೆ ಸಿಎಂ ಕುರ್ಚಿಯ ಭ್ರಮೆಯಲ್ಲಿ ಕಾದಾಡುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಒಂದುಗೂಡಿಸಲು ವರ್ಷ ಸಾಕಾಗುವುದಿಲ್ಲ ಎಂದು ಅನಿಸುತ್ತಿದೆ. ಮೊದಲು ಇವರಿಬ್ಬರನ್ನು ಜೋಡಿಸಿ ನಂತರ ಮುಂದುವರೆಯಲು ಸೋನಿಯಾ ತಮ್ಮ ಮಗನಿಗೆ ಹೇಳಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದು, ಅ.6ರಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋನಿಯಾ ಆಗಮನದ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.