ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ 2 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಸುಪ್ರೀಮ್ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಬಗ್ಗೆ 17 ವರ್ಷದ ವಿದ್ಯಾರ್ಥಿ ಆದಿತ್ಯ ದುಬೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಶೇಶ ಪೀಠ, ಕೇಂದ್ರ ಸರ್ಕಾರ ಹಾಗೂ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಮನೆಯಲ್ಲಿಯೂ ಮಾಸ್ಕ್ ಹಾಕಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಯು ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಎಚ್ಚೆತ್ತುಕೊಳ್ಳದ ಬಗ್ಗೆ ಚಾಟಿ ಬೀಸಿದೆ.
150 ವರ್ಷಗಳ ಹಿಂದೆಯೇ ಹವಾಮಾನ ಬದಲಾವಣೆ ಬಗ್ಗೆ ಎಚ್ಚರಿಸಿದ್ದ ವಿಜ್ಞಾನಿ
ದೆಹಲಿಯಲ್ಲಿ ಹದಗೆಟ್ಟ ಗಾಳಿ ಗುಣಮಟ್ಟವನ್ನು ನಿಯಂತ್ರಣ ಮಾಡಲು ಎರಡು ದಿನಗಳ ಲಾಕ್ ಡೌನ್ ವಿಧಿಸುವಂತೆ ಕೋರ್ಟ್ ಸೂಚನೆ ನೀಡಿದೆ.