ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪದಿಂದ ಇನ್ನೂ 2 ದಿನ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪದಿಂದ 2 ದಿನ ಉಷ್ಣ ಇರುವ ಸಾಧ್ಯತೆಯಿದೆ. ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಹೊರಗಡೆ ಹೆಚ್ಚು ಸುತ್ತಾಡಬೇಡಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಹಣ್ಣಿನ ಜ್ಯೂಸ್, ಹೆಚ್ಚು ನೀರು ಕುಡಿಯುವಂತೆ ಸಲಹೆ ನೀಡಲಾಗಿದೆ. ಹೊರಗಡೆ ಹೋಗುವಾಗ ಟೋಪಿ, ಛತ್ರಿ ಬಳಸಲು ಸಲಹೆ ನೀಡಲಾಗಿದೆ.
ಉಳಿದಂತೆ ವಾತಾವರಣದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.